ವಿಧಾನಸೌಧದ ಮುಂದೆ ದೊಡ್ಡದಾಗಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಮೂದು ಮಾಡಿದ್ದರೂ, ಅಲ್ಲಿ ನಡೆಯುವುದು ಬರೀ ಭ್ರಷ್ಟಾಚಾರ ಎನ್ನುವುದು ಸಮಾನ್ಯ ಸಾರ್ವಜನಿಕರ ದೂರು ಆಗಿದೆ. ಆದಕ್ಕೆ ಪೂರಕ ಎಂಬಂತೆ ನಿನ್ನೆ ಸಂಜೆ ವಿಧಾನಸೌಧದಲ್ಲಿ ಅಧಿಕೃತ ದಾಖಲೆಗಳಿಲ್ಲದ 10 ಲಕ್ಷ ರೂ. ನಗದು ಹಣ ತೆಗೆದುಕೊಂಡು ಹೋಗುತ್ತಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅವರಿಂದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.
ಇನ್ನು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್ ರಿಂದ ಹಣ ಜಪ್ತಿ ಮಾಡಲಾಗಿದೆ. ಕೆಲಸ ನಿಮಿತ್ತ ವಿಕಾಸ ಸೌಧಕ್ಕೆ ಬಂದಿದ್ದ ಇಂಜಿನಿಯರ್ ಜಗದೀಶ್ ಅವರನ್ನು ವಿಧಾನಸೌಧ ಪಶ್ಚಿಮ ದ್ವಾರದ ಗೇಟ್ ಬಳಿ ಪೊಲೀಸರು ಭದ್ರತೆ ದೃಷ್ಟಿಯಿಂದ ಪರಿಶೀಲನೆ ಮಾಡಿದ್ದಾರೆ. ಈ ವೇಲೆ ಸೂಟ್ಕೇಸ್‌ನಲ್ಲಿ 10 ಲಕ್ಷ ರೂ. ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ತಾನು ಈ ಹಣವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ತಂದಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾರೆ.
ಹಣದ ಬಗ್ಗೆ ದಾಖಲೆಗಳು ಲಭ್ಯವಾಗಿಲ್ಲ: ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಅವರು, ವಿಧಾನ ಸೌಧ ಮತ್ತು ವಿಕಾಸ ಸೌಧ ಭದ್ರತೆಯ ದಾಖಲೆಯಿಲ್ಲದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. PWD ಇಲಾಖೆಯ ಜೂನಿಯರ್ ಇಂಜಿನಿಯರ್ ಒರ್ವರು ಹಣದ ಸಹಿತ ಬಂದಿದ್ದಾರೆ. ಈ ವೇಳೆ ಹಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ ಸರಿಯಾದ ಉತ್ತರ ಸಿಕ್ಕಿಲ್ಲ. ಬಳಿಕ ವಿಧಾನ ಸೌಧ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿ ದೂರು ಬಂದಿದೆ. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿದೆ. ಹತ್ತು ಲಕ್ಷದ ಐವತ್ತು ಸಾವಿರ ಹಣ ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯಕ್ಕೆ ಹಣವನ್ನು ಹಾಜರು ಪಡಿಸಲಿದ್ದೆವೆ. ಹಣ ತಂದಿದ್ದ ವ್ಯಕ್ತಿಗೆ ನೋಟೀಸ್ ನೀಡಲಾಗಿದೆ. ಎಲ್ಲಿ ಡ್ರಾ ಮಾಡಲಾಗಿದೆ. ಯಾರಿಗೆ ಕೊಡುವ ಉದ್ದೇಶ ಇದೆ ಎಂಬುದನ್ನು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಚುನಾವಣೆ ವೇಳೆ ಗಿಮಿಕ್ ಮಾಡಲಾಗುತ್ತಿದೆ: ವಿಧಾನಸೌಧದಲ್ಲಿ 10 ಲಕ್ಷ ಹಣ ಸಿಕ್ಕಿದೆ. ಯಾವ ಉದ್ದೇಶಕ್ಕೆ ಯಾರಿಗೆ ಹಣ ತಂದಿದ್ದ ಎನ್ನೋದು ಗೊತ್ತಾಗಬೇಕು. ಈಗಷ್ಟೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ತಪ್ಪಾಗುತ್ತದೆ. ಅವನ ಸ್ಟೇಟ್ ಮೆಂಟ್ ಪಡೆದ ಬಳಿಕವಷ್ಟೇ ಗೊತ್ತಾಗಬೇಕು. ಶೇಕಡಾ 40% ಅದು-ಇದೂ ಎಲ್ಲ ಹಿಂದಿನ ಸರ್ಕಾರದಲ್ಲೇ ನಡೆದಿತ್ತು. ಇಲ್ಲದಿದ್ದರೆ ಅವರು ಸರ್ಕಾರದಿಂದ ಯಾಕೆ ಇಳಿಯುತ್ತಿದ್ದರು? ಸುಮ್ಮನೆ ಚುನಾವಣೆ ಸಂದರ್ಭ ಗಿಮಿಕ್ ಮಾಡ್ತಿದ್ದಾರೆ. ಈಗಾಗಲೇ ಒಬ್ಬ ಮಂತ್ರಿ ಕೇಸ್ ಹಾಕಿದ್ದಾರೆ ಕೇಸ್ ತನಿಖೆ ನಡೆಯುತ್ತಿದೆ.- ಗೃಹ ಸಚಿವ ಆರಗ ಜ್ಞಾನೇಂದ್ರ
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…