ಕರ್ನಾಟಕದ ಐಟಿ ಸಂಸ್ಥೆಗಳು ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಈ ಹೊಸ ಪ್ರಸ್ತಾವನೆಗೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆ 14 ಗಂಟೆ ಕೆಲಸದ ಅವಧಿ ವಿಸ್ತರಿಸುವ ವಿಚಾರಕ್ಕೆ ಸಿಡಿದೆದ್ದ ಐಟಿ ನೌಕರರಿಂದ ರಾಜ್ಯ ಸರ್ಕಾರದ ವಿರುದ್ಧ ಮಹಾದೇವಪುರ, ಎಲೆಕ್ಟ್ರಾನಿಕ್ ಸಿಟಿ, ಬುಕ್ ಫೀಲ್ಡ್ ಭಾಗದಲ್ಲಿ ನಿನ್ನೆಯಿಂದಲೇ ಪ್ರತಿಭಟನೆ ಆರಂಭವಾಗಿದೆ.
ಐಟಿ ನೌಕರರ ಸಂಘದ ಕಡೆಯಿಂದ ನಾಳೆ ಸಭೆ ನಡೆಸಿ ಬಳಿಕ ಕಾರ್ಮಿಕ ಸಚಿವ ಸಂತೋಷ್ ಲಾರ್ಡ್ ರವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಅವಧಿ ವಿಸ್ತರಿಸಿದಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ. ಒಂದು ವೇಳೆ ಮನವಿ ವಿರುದ್ಧವಾಗಿ ಅವಧಿ ವಿಸ್ತರಿಸಿದರೆ ಬೃಹತ್ ಪ್ರತಿಭಟನೆಗೆ ಮುಂದಾಗುವುದಾಗಿ ಹೇಳಿಕೊಂಡಿದ್ದಾರೆ.

error: Content is protected !!