ಲೈಂಗಿಕ ಶೋಷಣೆಗೆ ಬಲಿಯಾದ 15 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋಗಳನ್ನು ನೋಡವ ಮೂಲಕ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿ, ನಂತ್ರ ನವಜಾತ ಶಿಶುವನ್ನು ಕೊಂದ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ. ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಇದರಿಂದ ಬಾಲಕಿ ಗರ್ಭ ಧರಿಸಿದ್ದಾಳೆ. ಗೌಪ್ಯತೆಯನ್ನು ಕಾಪಾಡಿಕೊಳ್ಳಲು, ನನಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ ಅಂತಾ ಹೇಳ್ಕೊಂಡು, ತಾಯಿಯಿಂದ ಬಾಲಕಿ ತನ್ನ ಹೊಟ್ಟೆಯ ಹುಬ್ಬನ್ನು ಮರೆಮಾಚುತ್ತಿದ್ದಳು.
ಅಂಬಾಜಾರಿ ಪ್ರದೇಶದ ನಿವಾಸಿಯಾದ ಬಾಲಕಿ ಮನೆಯವರಿಗೆ ಈ ವಿಷಯವನ್ನು ಹೇಳಲು ಹೆದರಿದ್ದಳು. ಹೀಗಾಗಿ, ಯೂಟ್ಯೂಬ್ ವೀಡಿಯೋಗಳನ್ನು ವೀಕ್ಷಿಸಲು ಪ್ರಾರಂಭಿಸಿದಳು. ಮಾರ್ಚ್ 2 ರಂದು ಬಾಲಕಿ ತನ್ನ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಕ್ಷಣವೇ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿ ಶವವನ್ನು ತನ್ನ ಮನೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಳು. ಮನೆಗೆ ಮರಳಿದ ತಾಯಿ ಬಾಲಕಿಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಬಾಲಕಿ ತಾಯಿಗೆ ತನ್ನ ದುಃಖವನ್ನು ವಿವರಿಸಿದಳು. ನಂತರ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನವಜಾತ ಶಿಶುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.