ಹೊಸೂರು: ರಾಜ್ಯದ ಗಡಿ ಭಾಗ ಆನೇಕಲ್ಗೆ ಹೊಂದಿಕೊಂಡ ತಮಿಳುನಾಡಿನ ಹೊಸೂರಿನಲ್ಲಿ ಸರ್ಕಾರಿ ಶಾಲೆಯೊಂದರ 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸೂರು ಮಹಾನಗರ ಪಾಲಿಕೆಯ ಕಾಮರಾಜ್ ಕಾಲನಿಯಲ್ಲಿರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದಿದ್ದು, ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಶಾಲೆಯಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಂದಿನಂತೆ ಇಂದು ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ ನೀಡಲಾಗಿತ್ತು. ಊಟ ಮುಗಿಸಿ 2 ಗಂಟೆಗೆ ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನ ಬಳಿಕ 6 ಮತ್ತು 7ನೇ ತರಗತಿಯ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕಣ್ಣು ಮಂಜಾಗಿದೆ. ನೋಡನೋಡುತ್ತಿದ್ದಂತೆ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.
ಗಾಬರಿಗೊಂಡ ಶಿಕ್ಷಕರು ಮತ್ತು ಸಿಬ್ಬಂದಿ, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಆಂಬುಲೆನ್ಸ್ನಲ್ಲಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆತಂಕಗೊಂಡ ಪಾಲಕರು ಶಾಲೆ ಮತ್ತು ಆಸ್ಪತ್ರೆ ಬಳಿಗೆ ದೌಡಾಯಿಸಿದ್ದಾರೆ.
ಶಾಲಾ ಸಮೀಪ ಯಾವುದೋ ಕೆಮಿಕಲ್ ಟ್ಯಾಂಕ್ ಒಡೆದಿದ್ದು, ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ತನಿಖೆ ಬಳಿಕ ಹಾಗೂ ಆಸ್ಪತ್ರೆಯ ವರದಿ ಬಂದ ಬಳಿಕ ಘಟನೆಗೆ ಕಾರಣ ಏನೆಂದು ತಿಳಿಯಲಿದೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…