18 ವರ್ಷದ ಮಗಳ ಮೇಲೆ ನಿರಂತರ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. 12ನೇ ತರಗತಿಯ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಸಂತ್ರಸ್ತೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಪಾಪಿ ತಂದೆ ವಿರುದ್ಧ ಪ್ರಕರಣ ದಾಖಲಿಸಿದ್ದಳು. ಬಾಲಕಿಯ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ನನ್ನ ತಂದೆ ಕಳೆದ ಮೂರು ವರ್ಷಗಳಿಂದ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದರು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೈ, ಕಾಲುಗಳನ್ನು ಕತ್ತರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ವಿಷಯ ನನ್ನ ತಾಯಿಗೂ ಗೊತ್ತಾಗಿದ್ದರೂ ತಂದೆಗೆ ಬೆಂಬಲ ನೀಡುತ್ತಿದ್ದಳು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಳು.