ಖಚಿತ ಮಾಹಿತಿ ಮೇರೆಗೆ ಸಿ.ಇ.ಎನ್ ಪೊಲೀಸ್ ಠಾಣೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆಯಲ್ಲಿ ಪೋಲೀಸ್ ಇನ್ಸಪೆಕ್ಟರ್ ಲಕ್ಷ್ಮೀನಾರಾಯಣ ಮತ್ತು ಸಿಬ್ಬಂದಿಗಳು ಬಂಗಾರಪೇಟೆಯ ಹುಣಸನ ಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಕೋಲಾರದ ಸುಗಟೂರು ವಾಸಿ ರಾಹುಲ್ ನನ್ನು ಬಂಧಿಸಿ, ಆತನಿಂದ ರೂ.2,00,000/- ಮೌಲ್ಯದ 2 ಕೆಜಿ 615 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ.
ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಪಿ.ಐ. ಲಕ್ಷ್ಮೀನಾರಾಯಣ ರವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಶ್ರಿ . ಕೆ.ಎಂ . ಶಾಂತರಾಜು ರವರು ಶ್ಲಾಘಿಸಿದರು.
ವರದಿ: ರೋಶನ್ ಝಮೀರ್