ಮೂರು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ 22 ಸಾವಿರ ಕೋಟಿ ರೂ. ಅನುದಾನ ಪ್ರಕಟಿಸಿದೆ. ಕಳೆದ ಎರಡು ವರ್ಷಗಳಿಂದ ಗೃಹ ಬಳಕೆಯ ಎಲ್‌ಪಿಜಿ ಬೆಲೆ ಭಾರೀ ಏರಿಕೆಯಾಗಿದ್ದರೂ ಕಡಿಮೆ ದರದಲ್ಲಿ ವಿತರಣೆ ಮಾಡಿದ ಹಿನ್ನೆಲೆಯಲ್ಲಿ ಆಗಿರುವ ನಷ್ಟವನ್ನು ಸರಿದೂಗಿಸಲು ಈ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ ಕಂಪನಿಗಳಿಗೆ ಈ ಅನುದಾನ ನೀಡುವ ನಿರ್ಧಾರ ಕೈಗೊಂಡಿದೆ.
ಜೂನ್ 2020 ರಿಂದ ಜೂನ್ 2022ರ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಬೆಲೆ ಶೇ.300 ರಷ್ಟು ಹೆಚ್ಚಳ ಕಂಡಿದೆ.