ಕೊಟ್ಟೂರು: ಪಟ್ಟಣದ ಆರಾಧ್ಯ ದೈವ ಶ್ರೀಗುರು ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಶುಕ್ರವಾರ ಬೆಳಿಗ್ಗೆ ೧೦.೦೦ ಆರಂಭವಾಗಿ ಮಧ್ಯಾಹ್ನದವರೆಗೂ ನಡೆಯಿತು. ಹುಂಡಿಯಲ್ಲಿ ಒಟ್ಟು ೬೧,೧೩,೮೮೬/- ಸಂಗ್ರಹವಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದರು. ಶಾಲಾ ವಿದ್ಯಾರ್ಥಿಗಳು, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಸ್ಥಾನದ ಆಯಗಾರರು ಊರಿನ ಪ್ರಮುಖರು ಉಪಸ್ಥಿತರಿದ್ದರು. ಬೆಳಿಗ್ಗೆಯಿಂದಲೂ ಸುಗಮವಾಗಿ ಸಾಗಿದ ಎಣಿಕೆ ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣ ಎಣಿಕೆ ಕಾರ್ಯ ಮುಗಿಯಿತು. ದೇವಸ್ಥಾನದ ಪ್ರಧಾನ ಧರ್ಮಕರ್ತ ಸಿ.ಎಚ್.ಎಂ.ಗಂಗಾಧರಯ್ಯ, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ.ಬಿ.ಎಂ., ಕಟ್ಟೆಮನಿ ದೈವಸ್ಥರು, ಉಪಸ್ಥಿತರಿದ್ದರು.

ವರದಿ:ಮಣಿಕಂಠ.ಬಿ

error: Content is protected !!