
ಹಾವೇರಿ: ಹಾವೇರಿಯಿಂದ ಹಾನಗಲ್ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 7 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಆರು ಮಂದಿಯನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಹಾವೇರಿ-ಹಾನಗಲ್ ಹೆದ್ದಾರಿಯ ಶೀಗಿಹಳ್ಳಿ ಗ್ರಾಮದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದರು. ಪರಿಶೀಲನೆಯ ಸಂದರ್ಭದಲ್ಲಿ ವಿಶಾಲ ಪ್ರಮಾಣದ ಗಾಂಜಾ ಪತ್ತೆಯಾಗಿದೆ.
ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಅವರ ವಿರುದ್ಧ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಪಿಐ ಆಂಜನೇಯ ಎನ್.ಎಚ್., “ತನಿಖೆ ಮುಂದುವರಿಯುತ್ತಿದೆ. ಮಾದಕ ವಸ್ತುಗಳ ಸಾಗಣೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ” ಎಂದು ತಿಳಿಸಿದ್ದಾರೆ.