ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 70% ರಷ್ಟು ಕೆಲಸ ನೀಡುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಈ ಕುರಿತು ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಒದಗಿಸುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವರದ್ಧಿ ವಿಧೇಯಕ-2022 ಅನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸ್ಥಳೀಯ ಕನ್ನಡಿಗರಿಗೆ ಶೇ. 70 ರಷ್ಟು ಉದ್ಯೋಗ ನೀಡುವುದು ಕಡ್ಡಾಯ. ಈ ಕಾನೂನು ಉಲ್ಲಂಘಿಸಿದ ಉದ್ದಿಮೆಗೆ ರಾಜ್ಯ ಸರ್ಕಾರದ ಸೌಲಭ್ಯ ಹಾಗೂ ರಿಯಾಯಿತಿಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.

error: Content is protected !!