ಕಲಬುರಗಿ ಹೊಸ ಜೇವರ್ಗಿ ರಸ್ತೆಯ ಗೋದುತಾಯಿ ಕಾಲೋನಿಯ ಶಿವಾ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ರಾಷ್ಟ್ರೀಯ ವೃತ್ತಿ ಸೇವೆ ಯೋಜನೆಯಡಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಾ ಪಿಯು ಮತ್ತು ಪದವಿ ಕಾಲೇಜು ಕಲಬುರಗಿ ಇವುಗಳ ಸಹಯೋಗದೊಂದಿಗೆ ಇದೇ ಅಕ್ಟೋಬರ್ 13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎ., ., ಬಿ.ಎಸ್ಸಿ.,ಬಿ.ಕಾಂ. ಬಿ.ಬಿ.ಎ., ಬಿ.ಇ.,ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ., ಎಂ.ಟೆಕ್ ಹಾಗೂ ಎಂ.ಸಿ.ಎ. ಪಾಸಾದ ವಯೋಮಿತಿ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.
ವರದಿ ನಾಗರಾಜ್ ಗೊಬ್ಬುರ್