ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ತಾಯಿಯದುರೆ ಅಪ್ರಾಪ್ತ ಬಾಲಕಿಯ ಮೇಲೆ ಐವರು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರು ಬಾಲಕಿಯನ್ನು ಎಳೆದೊಯ್ದಿದ್ದಾರೆ.
ಇದನ್ನು ತಡೆಯಲು ಮುಂದಾದ ಆಕೆಯ ತಾಯಿಯನ್ನು ಥಳಿಸಿದ್ದು, ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಈ ಸಂಬಂಧ ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನುಳಿದ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.