ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 17 ವರ್ಷದ ಹುಡುಗನೊಬ್ಬ ಪಿಯುಸಿ ಓದುತ್ತಿದ್ದಂತಹ 16 ವರ್ಷದ ಅಪ್ರಾಪ್ತ ಬಾಲಕಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿರುವ ಘಟನೆ ನಡೆದಿದೆ.
ಹುಡುಗ ಪಾಲಿಟೆಕ್ನಿಕ್ ನಲ್ಲಿ ಓದುತ್ತಿದ್ದು ಹುಡುಗಿ ಪಿಯುಸಿ ಓದುತ್ತಿರುತ್ತಾಳೆ ಬಸ್ ನಿಲ್ದಾಣದಲ್ಲಿ ಎಲ್ಲರ ಮುಂದೆ ತಾಳಿ ಕಟ್ಟಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಎಚ್ಚೆತ್ತುಕೊಂಡು ಈ ವಿಚಾರದ ಬಗ್ಗೆ ತನಿಖೆ ನಡೆಸಿ ಹುಡುಗನನ್ನು ಬಂಧಿಸಿದ್ದಾರೆ ಹಾಗೂ ಹುಡುಗಿಗೆ ಮಕ್ಕಳ ಕಲ್ಯಾಣ ಸಮಿತಿಯ ಕಚೇರಿಯಲ್ಲಿ ಕೌನ್ಸಿಲಿಂಗ್ ನೀಡಲಾಗುತ್ತಿದೆ. ಹಾಗೂ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಾಲಾಜಿ ಗಣೇಶ್ ಎಂಬಾತನನ್ನು ಪೊಲೀಸರು ಬಂಧಿಸಿರುತ್ತಾರೆ.