ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ರೇಣಿಗುಂಟದಲ್ಲಿರುವ ಸರ್ಕಾರಿ ಬುಡಕಟ್ಟು ಕಲ್ಯಾಣ ಬಾಲಕಿಯರ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿದ್ದಾನೆ.
ಆರೋಪಿಯು ಬಾಲಕಿ ವಾಸವಾಗಿದ್ದ ಹಾಸ್ಟೆಲ್ ನ ವಾರ್ಡನ್ ಆಗಿದ್ದ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆತ, ಸುಮಾರು ಒಂದು ತಿಂಗಳ ಹಿಂದೆ ಶಾಲೆಯಿಂದ ವರ್ಗಾವಣೆಯಾಗಿದ್ದ.
ಬಾಲಕಿ ತಾನು ಗರ್ಭಿಣಿ ಎಂಬ ಸುದ್ದಿಯನ್ನು ಆತನನ್ನು ತಲುಪಿಸಿದ್ದು, ದಸರಾ ರಜೆಯಲ್ಲಿ ಅಕ್ರಮವಾಗಿ ಗರ್ಭಪಾತ ಮಾಡಿಸಲು ಬಾಲಕಿಯನ್ನು ಒಂಗೋಲ್ ನಲ್ಲಿರುವ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದಿದ್ದ.
ಈ ನಡುವೆ ಬಾಲಕಿ ಹಬ್ಬಕ್ಕೆ ಮನೆಗೆ ಬಾರದೆ ಇದ್ದಿದ್ದರಿಂದ ಮನೆಯವರು ಹಾಸ್ಟೆಲ್ ಗೆ ಹೋಗಿ ವಿಚಾರಿಸಿದ್ದಾರೆ. ಅಲ್ಲಿ ವಿದ್ಯಾರ್ಥಿನಿ ಇಲ್ಲದಿರುವುದು ಗೊತ್ತಾಗಿ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿ ಶ್ರೀನಿವಾಸ ರಾವ್ ಜೊತೆಗಿದ್ದಳು ಎಂಬುದು ಗೊತ್ತಾಗಿದೆ.
ಪೊಲೀಸರಿಗೆ ದೂರು ಬಂದಿದೆ ಎಂದು ತಿಳಿದಾಗ ಆರೋಪಿ ಅಪ್ರಾಪ್ತೆ ಮಾಚರ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಬಾಲಕಿಯನ್ನು ರಕ್ಷಿಸಿ ಶಿಶುಪಾಲನಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಗರ್ಭಪಾತಕ್ಕೆ ಆಸ್ಪತ್ರೆಗೆ ಕರೆತಂದು ಅಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪೆದ್ದಲಪುಡಿ ಶ್ರೀನಿವಾಸ ರಾವ್ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಪಿಸಿಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದಾಗ ಈ ಅಪರಾಧ ಬೆಳಕಿಗೆ ಬಂದಿದೆ.