ಉತ್ತರಪ್ರದೇಶ: ಜುಲೈ 16ರಂದು ತಮ್ಮ ಹಳ್ಳಿಯ ಇಬ್ಬರು ವ್ಯಕ್ತಿಗಳು ಕಬ್ಬಿನ ಗದ್ದೆಗೆ ಎಳೆದೊಯ್ದು, ಚಾಕುವಿನಿಂದ ಬೆದರಿಸಿ ಅತ್ಯಾಚಾರ ಮಾಡಿದ್ದಾರೆ. ಘಟನೆ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಎಫ್‌ಐಆರ್ ಸಹ ದಾಖಲಿಸಲಿಲ್ಲ. ನಂತರ ಕೋರ್ಟ್ ಮೆಟ್ಟಿಲೇರಬೇಕಾಯಿತು’ ಎಂದು ಸಂತ್ರಸ್ತೆಯು ದೂರಿನಲ್ಲಿ ತಿಳಿಸಿದ್ದಾರೆ.
ಈ ಘಟನೆ ನಡೆದು ಸುಮಾರು ನಾಲ್ಕು ತಿಂಗಳ ನಂತರ ಪೊಲೀಸರು ಕೋರ್ಟ್ ಆದೇಶದ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ.
ಮಂಗಳವಾರ ಸುನಗಢಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಗರ್ಭಪಾತವಾಗಿದೆ. ತನಿಖೆ ಬಳಿಕ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಹೇಳಿದ್ದಾರೆ.