ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೀರಶೈವ ಬೀದಿಯಲ್ಲಿ ದಲಿತ ಮಹಿಳೆಯೊಬ್ಬರು ರಸ್ತೆ ಬದಿ ಇದ್ದ ಟ್ಯಾಂಕ್ ನೀರು ಕುಡಿದಿದ್ದರು. ಈ ಕಾರಣಕ್ಕೆ ನೀರನ್ನು ಖಾಲಿ ಮಾಡಿ, ಟ್ಯಾಂಕ್’ಗೆ ಗೋಮೂತ್ರ ಸಿಂಪಡಿಸಿ ಸ್ವಚ್ಛ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೀಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ತಾಲೂಕು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿವರ ಸಂಗ್ರಹಿಸಿ ತಹಶೀಲ್ದಾರ್ಗೆ ವರದಿ ಸಲ್ಲಿಸಿದ್ದಾರೆ.
1 thought on “ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು!”
Comments are closed.