ಕಬ್ಬಿನ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಒತ್ತಾಯಿಸಿ 53 ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ಟನ್ ಕಬ್ಬಿಗೆ 2800 ರೂ.
ನಿಗದಿ ಮಾಡುವುದಾಗಿ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ. ಹಾಗೂ ಸಿಎಂ ಬೊಮ್ಮಾಯಿ 7 ದಿನಗಳಲ್ಲಿ ಮತ್ತೆ ರೈತರ ಜೊತೆ ಸಭೆ ನಡೆಸುವುದಾಗಿ ಹೇಳಿದ್ದಾರೆ.
ನ್ಯಾಯಯುತ ಬೆಲೆ ನಿಗದಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಯನ್ನು ಕೈ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬೆಲೆ ನಿಗದಿ ಮಾಡದೇ ಇದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಬ್ಬಿನ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಳೆದ 53 ದಿನಗಳಿಂದ ರಾಜ್ಯದ ಹಲವು ಕಡೆ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು . ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಹೆದ್ದಾರಿ ಬಂದ್ ಮಾಡಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.

error: Content is protected !!