ಪ್ರಾಂಶುಪಾಲ ಅತ್ಯಾಚಾರ ಎಸಗಿದ ಆರೋಪ ಉತ್ತರಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ.
ಪ್ರಾಂಶುಪಾಲರು ನವೆಂಬರ್ 23 ರಂದು ಶಾಲೆಯ ಒಂಬತ್ತು ವಿದ್ಯಾರ್ಥಿನಿಯರನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು ಮತ್ತು ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು. ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿನಿಯರು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ -17 ವರ್ಷದ ಬಾಲಕಿಯೊಂದಿಗೆ ಉಳಿದುಕೊಂಡಿದ್ದರು ಎನ್ನಲಾಗಿದೆ.
ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾಸದಿಂದ ವಿದ್ಯಾರ್ಥಿಗಳು ನವೆಂಬರ್ 24 ರಂದು ತಮ್ಮ ಮನೆಗೆ ಮರಳಿದ್ದರು. ಆರಂಭದಲ್ಲಿ ಬಾಲಕಿ ಘಟನೆಯ ಬಗ್ಗೆ ಮೌನವಾಗಿದ್ದಳು ಆದರೆ ನಂತರ ಘಟನೆಗಳ ಕುರಿತು ಸಂಪೂರ್ಣವಾಗಿ ತನ್ನ ಕುಟುಂಬ ಸದಸ್ಯರಿಗೆ ವಿವರಿಸಿದಳು ಎಂದು ಅವರು ಹೇಳಿದರು. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ನಾಪತ್ತೆಯಾಗಿರುವ ಪ್ರಾಂಶುಪಾಲರನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ.