ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.
ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಕಸ್ತೂರಿ ನಿವಾಸ, ಜೇಡರ ಬಲೆ, ಎರಡು ಕನಸು ಸೇರಿದಂತೆ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.