ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲೆ ಶಿಕ್ಷಕಿ ದಿಲಶಾದ್ ಹವಾಲ್ದಾರ್ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳ ದಾಳಿಯ ವೇಳೆ ಶಿಕ್ಷಕಿಯ ಪುತ್ರನ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಇಂಡಿ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಹಂತಕರಿಗೆ ಬಂಧನಕ್ಕೆ ಬಲೆ ಬೀಸಿದ್ದಾರೆ.