ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಬನವಾಸಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಜೊತೆಗೊಡಿ ಇಂದು ಬನವಾಸಿ ಭಾಗದ ರೈತರ ಬಹುಕಾಲದ ಕಸನಾಗಿದ್ದ ಬೃಹತ್ ಏತ ನೀರಾವರಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿದರು.
ಈ ಅತಿ ದೊಡ್ಡ ನೀರಾವರಿ ಯೋಜನೆಯಿಂದಾಗಿ ಬನವಾಸಿ ಭಾಗದ 32 ಕೆರೆಗಳು ತುಂಬಲಿದೆ ಈ ಮೂಲಕವಾಗಿ ಈ ಭಾಗದ ರೈತರು ಬೇಸಿಗೆಯಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಅನೂಕುಲವಾಗಲಿದೆ.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ಧಿ, ನಿಗಮ ಮಂಡಳಿಯ ಅಧ್ಯಕ್ಷರಾದ ಗೋವಿಂದ ನಾಯ್ಕ ಸೇರಿದಂತೆ ವಿವಿಧಸ್ಥರದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಸ್ಥರದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಶ್ರೀಪಾದ್ ಎಸ್ ಏಚ್