60 ವರ್ಷದ ಅಜ್ಜನೊಬ್ಬ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಮಾಡಿದ ನಂತರ, ಮೊಮ್ಮಗಳು ಈ ವಿಚಾರವಾಗಿ ಯಾರೊಂದಿಗೆ ಹೇಳದೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ್ದಾನೆ. 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್ಪುರ ಪೊಲೀಸರು ಬಂಧಿಸಿದ್ದಾರೆ.
ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿದ್ದಾನೆ. ಕಟ್ಟಿಗೆ ಕಡಿಯಲು ಕೊಡಲಿ ತರುವಂತೆ ಮೊಮ್ಮಗಳಿಗೆ ತಿಳಿಸಿದ್ದಾನೆ. ಮೊಮ್ಮಗಳು ಮನೆಗೆ ಹೋಗಿ ಕೊಡಲಿ ತಂದಾಗ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ.
ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನ ಸೇರಿಸಿ, ಅಜ್ಜನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಕುಟುಂಬಸ್ಥರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.