ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿಯಲ್ಲಿ ಎರಡನೇ ಬಾರಿಗೆ ಅವಕಾಶ ನೀಡಲಾಗಿದ್ದು, ಈ ಬಾರಿ ₹ 8.54 ಕೋಟಿ ಸಂಗ್ರಹವಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವ ಒಪ್ಪಿದ್ದ ಸರ್ಕಾರವು, ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಪ್ರಕರಣಗಳ ದಂಡ ಪಾವತಿ ಮೇಲೆ ರಿಯಾಯಿತಿ ನೀಡಿ ಆದೇಶ ಹೊರಡಿಸಿತ್ತು.
ಮೊದಲ ಸುತ್ತಿನಲ್ಲಿ ಸಾಕಷ್ಟು ಸವಾರರು ದಂಡ ಪಾವತಿಸಿದ್ದರು. ಅವಧಿ ಮುಗಿದ ಬಳಿಕ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಪಿಡಿಎ, ಪೇಟಿಎಂ, ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ) ಮೂಲಕ 2,96,150 ಮಂದಿ ದಂಡ ಪಾವತಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

 

error: Content is protected !!