ಕಲಬುರಗಿ : ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ತಿಳಿಸಿದ್ದಾರೆ. ಇದರಲ್ಲಿ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.40 ಕೋಟಿ, ಉಳಿದಂತೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವಲ್ಲಿ ನಿರತವಾಗಿದ್ದಾರೆ ಇದು ಆರಂಭ ಅಷ್ಟೇ ಇನ್ನೂ ಚುನಾವಣೆ ವರೆಗೂ ಇದೆ ಹಣದ ಆಟ ಇರುತ್ತಾ ಅಥವಾ ಜನ ಅಭಿವೃದ್ಧಿ ಮತ್ತು ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೋ ಕಾದು ನೋಡಬೇಕಾಗಿದೆ.
ವರದಿ; ನಾಗರಾಜ್ ಗೊಬ್ಬುರ್