ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಚಾಲಕನ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ಮಧ್ಯಾಹ್ನ ಸುಮಾರು 1.45 ಗಂಟೆಗೆ ನಡೆದಿದೆ.
ಸ್ವಾಮಿ (45) ಅಫಜಲಪುರ ತಾಲೂಕಿನ ಮದರಾ ಗ್ರಾಮದ ವ್ಯಕ್ತಿ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ, ಮಧ್ಯಾಹ್ನ ಸೂಪರ್ ಮಾರ್ಕೆಟ್ ಪ್ರದೇಶದ ನೂರಾರು ಜನರ ನಡುವೆ ಹಾಡು ಹಗಲ್ಲೆ ಕೊಲೆಗೆ ಕಲಬುರಗಿ ಜನ ಬೆಚ್ಚಿಬಿದ್ದಿದ್ದಾರೆ. ಸಹೋದರ ನಡುವಿನ ವೈ ಮನಸ್ಸು ಕಾರಣವಾಗಿದೆ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿ ನಾಗರಾಜ್