ಈಗಾಗಲೇ ರಾಜ್ಯ ಸರ್ಕಾರದಿಂದ ಬೋರ್ಡ್ ಪರೀಕ್ಷೆಯನ್ನು ಕೆಲ ತರಗತಿಗೆ ಪರಿಚಯಿಸಲಾಗಿತ್ತು. ಈಗ ಮುಂದುವರೆದು 9 ಮತ್ತು 11ನೇ ತರಗತಿಗೆ ಪರಿಚಯಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಚಿಂತನೆಯನ್ನು ನಡೆಸಲಾಗಿತ್ತು, 9 ಮತ್ತು 11ನೇ ತರಗತಿಗೆ ಇನ್ಮುಂದೆ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.
ಆದರೇ ಪರೀಕ್ಷೆಯಲ್ಲಿ ಕಾರ್ಯಕ್ಷಮತೆಯ ಆಧಾರ ಮೇಲೆ ವಿದ್ಯಾರ್ಥಿಗಳನ್ನು ಫೇಲ್ ಮಾಡದಂತೆ ನಿರ್ಧಾರವನ್ನು ಕೂಡ ಕೈಗೊಳ್ಳಲಿದೆ ಎನ್ನಲಾಗಿದೆ.
ಈಗಾಗಲೇ ಕೇರಳ ಮತ್ತು ಗುಜರಾತ್ ರಾಜ್ಯಗಳಲ್ಲಿ ಈ ಮಾದರಿಯಿದೆ. ಅದೇ ಮಾದರಿಯಲ್ಲಿ ಕರ್ನಾಟಕದ 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಪರಿಚಯಿಸೋದಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ. ಪ್ರಸ್ತುತ ರಾಜ್ಯದಲ್ಲಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಶಿಕ್ಷಣ ಇಲಾಖೆಯ ನೂತನ ಪ್ರಸ್ತಾವನೆಯಲ್ಲಿ 5 ಮತ್ತು 8ನೇ ತರಗತಿಗಳಿಗೆ ಹೋಲುವ ನೋ ಡಿಟೆನ್ಯನ್ ಪಾಲಿಸಿ ಅನ್ನು ಕೂಡ ಒಳಗೊಂಡಿದೆ. ಕೇವಲ ವಿದ್ಯಾರ್ಥಿಗಳ ಸಾಧನೆಯನ್ನು ಪ್ರೇರೇಪಿಸಲು ಬೋರ್ಡ್ ಪರೀಕ್ಷೆ ಪರಿಚಯಿಸಲಾಗುತ್ತಿದೆಯೇ ಹೊರತು, ವಿದ್ಯಾರ್ಥಿಗಳನ್ನು ಫೇಲ್ ಮಾಡೋದಕ್ಕಲ್ಲ ಎನ್ನಲಾಗುತ್ತಿದೆ.