ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಹಲಗೂರು ಪೊಲೀಸರು ಮಾಲು ಸಮೇತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ತಾಲೂಕಿನ ಹಲಗೂರು ನಾಡಕಛೇರಿಯ ಬಳಿ ಡಿವೈಎಸ್ ಪಿ ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿರುವ ಸಿಪಿಐ ಶ್ರೀಧರ್, ಪಿಎಸ್ಐ ಮಹೇಂದ್ರ ಹಾಗೂ ಪೊಲೀಸ್ ಸಿಬ್ಬಂದಿ ಕಾರಿನಲ್ಲಿದ್ದ 1ಕೆ.ಜಿ 355 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಬೆಂಗಳೂರು ನಿವಾಸಿ ನಿಶಾಂತ್‌ನನ್ನು ಕಾರು ಸಮೇತ ಬಂಧಿಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.