ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅಲ್ಲಿ ಚಿಕಿತ್ಸೆಗೆ ಹೆಚ್ಚಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ಬೆಂಗಳೂರಿನ ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಸತ್ಯಾಂಶ ತಿಳಿದುಕೊಳ್ಳದೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಮನವಿ ಮಾಡಿರುವ ಅವರ ದತ್ತುಪುತ್ರ ಉಮೇಶ್ ಆಸ್ಪತ್ರೆಯಲ್ಲಿ ತಿಮ್ಮಕ್ಕ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.