ಬಾಗಲಕೋಟೆ: ತಾಲೂಕಿನ ಸೀತಿಮನಿ ಆರ್.ಎಸ್. ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಈ ಶಾಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವುದಕ್ಕೆ 17 ಬ್ಲಾಕ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಂದು ಕೊಠಡಿಗೂ ಒಂದೊಂದು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
19 ಜನ ಕೊಠಡಿ ಮೇಲ್ವಿಚಾರಕರಿದ್ದು, 6 ಜನ ಮುಖ್ಯ ಮೇಲ್ವಿಚಾರಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೂ ಪೋಲಿಸ್ ಸಿಬ್ಬಂದಿಯ ವ್ಯವಸ್ಥೆ ಮಾಡಲಾಗಿದೆ.
ಸರ್ಕಾರದ ಆದೇಶದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಸಹ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಎ.ಎಮ್.ಪತ್ತಾರರವರು ತಿಳಿಸಿದ್ದಾರೆ.

ವರದಿ: ವಿಶ್ವನಾಥ ಭಜಂತ್ರಿ

error: Content is protected !!