ಕಲಬುರಗಿ: ಉಚ್ಚಾಯಿ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ದುರ್ಮರಣ. ಕಲಬುರಗಿ ನಗರದಲ್ಲಿ ಇಂದಿನಿಂದ ಆರಂಭವಾದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ. ಹೋಂಗಾರ್ಡ್ ಸಿಬ್ಬಂದಿ ರಾಮು ಸಿದ್ದಪ್ಪ (28) ಮೃತ ದುದೈವಿ. ಮೃತ ರಾಮು ಬೀದರ್ ಜಿಲ್ಲೆ ಇಟಗಾ ಗ್ರಾಮದವರು, ಮತ್ತೋರ್ವ ಸಿಬ್ಬಂದಿ ಅಶೋಕರೆಡ್ಡಿಗೆ ಗಂಭೀರ ಗಾಯ.
ತೇರು ಎಳೆಯುವ ವೇಳೆ ಉಂಟಾದ ಗದ್ದಲ, ಭಕ್ತರನ್ನ ನಿಯಂತ್ರಿಸುವ ವೇಳೆ ಚಕ್ರಕ್ಕೆ ಸಿಲುಕಿ ಸಾವು ಸಂಭವಿಸಿದೆ. ಗಾಯಾಳು ಹೋಂಗಾರ್ಡ್ ಸಿಬ್ಬಂದಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಉಂಟಾದ ಗದ್ದಲ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್‌ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!