ಕೊಟ್ಟೂರು:- ಹುಬ್ಬಳಿಯ ಬಿವಿಬಿ ಕಾಲೇಜಿನ ಎಂಸಿಎ ವಿಧ್ಯಾರ್ಥಿನಿ ನೇಹಾ ಹಿರೇಮಠ್ ಲವ್ ಜಿಹಾದಿಯ ಕಾರಣಕ್ಕಾಗಿ ಫಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಪಟ್ಟಣದ ತಾಲೂಕು ಆಡಳಿತ ಕಚೇರಿ ಮುಂದೆ ಭಾರತೀಯ ಜನತಾ ಪಾರ್ಟಿ ಕೊಟ್ಟೂರು ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು,ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ,ಆರೋಪಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಆಗ್ರಹಿಸಿ ತಾಲೂಕು ಆಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಟ್ಟೂರು ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಭರಮನಗೌಡ ಪಾಟೀಲ್ ರವರು ಮಾತನಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ,ಈ ಕುರಿತು ಗಂಭೀರ ಚಿಂತನೆ ಮಾಡಬೇಕಾದ ಸರ್ಕಾರ ಯಾವುದೇ ರೀತಿಯ ಕ್ರಮ ಜರುಗಿಸದೆ ಬೇಕಾಬಿಟ್ಟಿ ಹೇಳಿಕೆಯನ್ನು ನೀಡುತ್ತಾ ಓಲೈಕೆ ರಾಜಕಾರಣವನ್ನು ಮಾಡುತ್ತಿದೆ ಎಂದು ದೂರಿದರು.ಈ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ವಿಧ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕೆಂದು ಆಗ್ರಹಿಸಿ,ಹತ್ಯೆಯ ಘಟನೆಯನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಿ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕೊಟ್ಟೂರು ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ:- ಮಣಿಕಂಠ. ಬಿ