ಹುಬ್ಬಳ್ಳಿ ಬಳಿಯ ರಾಮನಾಳ ಕ್ರಾಸ್ ಹತ್ರ ಸರ್ಕಾರಿ ಸಾರಿಗೆ ಬಸ್ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೋಡೆದಿದ್ದರಿಂದ ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಐದಕ್ಕೂ ಹೆಚ್ಚು ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಕುಮಟಾ ಕಡೆಗೆ ಸಂಚರಿಸುತ್ತಿದ್ದ ಸರಕಾರಿ ಬಸ್ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು ಈ ಸಂದರ್ಭದಲ್ಲಿ ರಾಮನಾಳ ಕಡೆ ಹೋದಾಗ ಒಮ್ಮೆಲೇ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ ಚಾಲಕನ ಎರಡು ಕಾಲುಗಳು ಕಟ್ ಆಗಿದ್ದು 5 ಜನ ಪ್ರಯಾಣಿಕರು ತೀವ್ರ ಗಂಭೀರವಾಗಿ ಗಾಯಗೊಂಡಿದ್ದಾರೆ ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಲಘಟಗಿ ಪೊಲೀಸ್ ಠಾಣೆಯ ಪೊಲೀಸರು ಗಂಭೀರವಾಗಿ ಗಾಯಗೊಂಡ ಗಾಯಾಳಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಸಣ್ಣ ಪುಟ್ಟ ಗಾಯಗಳಾದ ಗಾಯಾಳುಗಳನ್ನು ಕಲಘಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಈ ಕುರಿತಂತೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಶಿವು ಹುಬ್ಬಳ್ಳಿ.