ಭಾನುವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್ ಪೇಟೆಯ ಕೆಂಚನಾಳ ಗ್ರಾಮದಲ್ಲಿ ನಡೆದಿದೆ. ಈ ವಿಚಾರವಾಗಿ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬ್ಯಾಂಕಿನಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಹವಾಮಾನ ಸರಿ ಇರದ ಕಾರಣ ಸರಿಯಾದ ಸಮಯಕ್ಕೆ ಬೆಳೆಯಬಾರದೇ ಸಾಲ ತೀರಿಸಲು ಕಷ್ಟವಾದ ಕಾರಣ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೊಲ್ಲೂರಪ್ಪ ಕೆಂಚನಾಳ ಗ್ರಾಮದ ನಿವಾಸಿಯಾಗಿದ್ದು 1.18 ಗುಂಟೆ ಜಮೀನು ಹೊಂದಿರುತ್ತಾರೆ. ಇವರಿಗೆ ಪತ್ನಿ ಹಾಗೂ ಪುತ್ರ, ಪುತ್ರಿ ಇರುತ್ತಾರೆ. ಅಡಿಕೆ ಮತ್ತು ಶುಂಠಿ ಬೆಳಗಾಗಿ ಸಾಲ ಮಾಡಿದ್ದು ಸಾಲ ತೀರಿಸಲಾಗದೆ ಭಾನುವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳೆನಾಶಕ ಸೇವಿಸಿದ್ದಾರೆ. ವಿಚಾರ ತಿಳಿದ ತಕ್ಷಣವೇ ಅವರನ್ನು ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ರೈತ ಕೊಲ್ಲೂರಪ್ಪ ಮೃತಪಟ್ಟಿದ್ದಾರೆ.