ಕೋರಮಂಗಲದ ಲೇಡಿಸ್ ಪಿಜಿಯಲ್ಲಿ ತಂಗಿದ್ದ ಬಿಹಾರ ಮೂಲದ ಕೃತಿ ಕುಮಾರಿ(24) ಕತ್ತು ಕೊಯ್ದು ದುಷ್ಕರ್ಮಿಯೊಬ್ಬ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬುಧವಾರ ರಾತ್ರಿ ಲೇಡಿಸ್ ಪಿಜಿಯ ಮೂರನೇ ಮಹಡಿಯಲ್ಲಿದ್ದ ಯುವತಿಯ ಕೊಠಡಿಗೆ ನುಗ್ಗಿದ ಯುವಕ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದು, ಪಿಜಿಗೆ ಭದ್ರತಾ ಸಿಬ್ಬಂದಿ ನೇಮಕ ಮಾಡದ ಲೋಪವನ್ನು ಬಳಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಜಿಯಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದ್ದು, ಕೊಲೆ ಮಾಡಿದ ಯುವಕ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.