ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ಪಾವತಿಸಲು ₹10.50 ಲಕ್ಷ ಪಾವತಿಸುವುದಕ್ಕಾಗಿ ₹1.50 ಲಕ್ಷ ಲಂಚ ಕೇಳಿದ ನಗರಸಭೆ ಆಯುಕ್ತ ನರಸಿಂಹ ಮೂರ್ತಿ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಆರ್. ವೆಂಕಟೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಗುತ್ತಿಗೆದಾರರಿಂದ ಲಂಚಕ್ಕಾಗಿ ಬೇಡಿಕೆ ಸಿಕ್ಕ ಸಂದರ್ಭದಲ್ಲಿ, ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ, ಅವರು ನಗಸಭೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದೊಂದಿಗೆ ಎರಡೂ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಇನ್ಸ್ಪೆಕ್ಟರ್ಗಳು ಬಾಲು ಮತ್ತು ಶಿಲ್ಪಾ ನೇತೃತ್ವದಲ್ಲಿ ನಡೆಸಿದರು.