ತುಮಕೂರು: 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ತ್ರಿಶಾಲ್ ಎಂಬ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ವಿಚಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತ್ರಿಶಾಲ್, ಸರ್ವೋದಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಮತ್ತು ಅವನು ಬಿಜೆಪಿ ಕಾರ್ಯಕರ್ತಿ ಶಕುಂತಲಾ ನಟರಾಜ್ ಅವರ ಪುತ್ರ. ತಾಯಿ ಶಕುಂತಲಾ ಜೊತೆಗೆ ವಿಜಯನಗರ 2ನೇ ಮುಖ್ಯ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಇಂದು ಬೆಳಿಗ್ಗೆ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ, ತ್ರಿಶಾಲ್ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಮುನ್ನ, ತ್ರಿಶಾಲ್ ಡೆತ್ ನೋಟ್ ಬರೆದಿದ್ದನು. ಡೆತ್ ನೋಟ್‌ನಲ್ಲಿ, ಪಾರಿವಾಳದ ಬೆಟ್ಟಿಂಗ್ ವಿಚಾರದಲ್ಲಿ ಸ್ನೇಹಿತರೊಂದಿಗೆ ಗಲಾಟೆ ನಡೆದು, ಅದರ ಪರಿಣಾಮವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಜಯನಗರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

Leave a Reply

Your email address will not be published. Required fields are marked *

Related News

error: Content is protected !!