ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ರಸ್ತೆ ಮೇಲೆ ನಾಯಿ ಅಡ್ಡ ಬಂದಿರುವುದರಿಂದ ಅಪಘಾತಕ್ಕೀಡಾಯಿತು. ಈ ಘಟನೆಯಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಮರಕ್ಕೆ ಡಿಕ್ಕಿಯಾಗಿದೆ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನಿನ L-1 ಹಾಗೂ L-4 ಮೂಳೆ ಮುರಿದಿದೆ.

ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯ ಡಾ. ರವಿ ಪಾಟೀಲ್ ಅವರ ಮಾಹಿತಿ ಪ್ರಕಾರ, 2 ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ. ಇನ್ನು, ಕಾರು ಚಾಲಕ, ಗನ್ ಮ್ಯಾನ್ ಮತ್ತು ಚನ್ನರಾಜ್ ಹಟ್ಟಿಹೊಳಿಗೆ ಕೂಡ ಚಿಕಿತ್ಸೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!