ರಾಜಸ್ಥಾನದ ಚಿತ್ತೋರ್ಗಢ ಜಿಲ್ಲೆಯ ಗಂಗರಾರ್ ಬ್ಲಾಕ್‌ನ ಅಜೋಲಿಯಾ ಖೇಡಾ ಗ್ರಾಮ ಪಂಚಾಯತಿಯ ಸಲೇರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಅಶ್ಲೀಲ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಶಾಲಾ ಕಚೇರಿಯಲ್ಲಿ ಪ್ರಾಂಶುಪಾಲ ಮತ್ತು ಶಿಕ್ಷಕಿಯೊಬ್ಬರು ಅಶ್ಲೀಲವಾಗಿ ವರ್ತಿಸುತ್ತಿರುವ ಸಿಸಿ ಟಿವಿ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈ ಪ್ರಕರಣ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಸಿಸಿ ಟಿವಿ ದೃಶ್ಯಗಳಲ್ಲಿ, ಪ್ರಾಂಶುಪಾಲರು ಮತ್ತು ಶಿಕ್ಷಕಿಯವರು ತಮ್ಮ ಕಚೇರಿ ಹಾಗೂ ಶಾಲೆಯ ವಿವಿಧ ಸ್ಥಳಗಳಲ್ಲಿ ಅನೈತಿಕ ಕೃತ್ಯಗಳಲ್ಲಿ ತೊಡಗಿರುವುದು ಸೆರೆಯಾಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕರಲ್ಲಿ ಆಕ್ರೋಶದ ಹೊರೆ ಎದ್ದಿದೆ. ಈ ಪ್ರಕರಣದ ತೀವ್ರತೆಗೆ ಸ್ಪಂದಿಸಿದ ಶಿಕ್ಷಣ ಇಲಾಖೆ, ಸಂಬಂಧಿಸಿದ ಪ್ರಾಂಶುಪಾಲ ಮತ್ತು ಶಿಕ್ಷಕಿಯನ್ನು ತಕ್ಷಣವೇ ಅಮಾನತು ಮಾಡಿದೆ ಮತ್ತು ವಿಚಾರಣೆಗೆ ಆದೇಶಿಸಿದೆ.

ಸ್ಥಳೀಯರು ಈ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮಸ್ಥರು ಪೊಲೀಸ್ ಠಾಣೆ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಿ, ಶಿಕ್ಷಕರನ್ನು ಕೆಲಸದಿಂದ ವಜಾಗೊಳಿಸುವಂತೆ ಕೇಳಿಕೊಂಡಿದ್ದಾರೆ.

ಶಿಕ್ಷಣ ಇಲಾಖೆ ಈ ಘಟನೆಗೆ ಗಂಭೀರವಾಗಿ ಸ್ಪಂದಿಸಿದ್ದು, ತನಿಖೆಗೆ ಸಮಿತಿ ರಚಿಸಿ, ಶೀಘ್ರ ಕ್ರಮ ಜರುಗಿಸಲಾಗುವುದು ಎಂದು ಹೇಳಿದೆ. ಈ ಪ್ರಕರಣ ಶಾಲೆಯ ಶೈಕ್ಷಣಿಕ ವಾತಾವರಣದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯೂ ಇದೆ ಎಂಬ ಆತಂಕ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.

 

error: Content is protected !!