ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಧೋಳ ನಲ್ಲಿ ಇಂದು ವಿದ್ಯಾರ್ಥಿಗಳಿಂದ ಮೂಲಭೂತ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳ ಪರದಾಡುತ್ತಿರುವುದನ್ನು ನೋಡಿ ಬೇಸರಗೊಂಡು ಎಲ್ಲ ವಿದ್ಯಾರ್ಥಿಗಳು ಕೂಡಿ ಶಾಲೆಯ ಮುಂದೆ ಕುಳಿತುಕೊಂಡು ಪ್ರತಿಭಟನೆ ಮಾಡುವುದರ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಮುಧೋಳ ತಸಿಲ್ದಾರ್ ರವರು ಮಾತನಾಡಿ ಇಲ್ಲಿವರೆಗೆ ನನ್ನ ಗಮನಕ್ಕೆ ಬಂದಿರಲಿಲ್ಲ ಈಗ ಎಲ್ಲಾ ವಿದ್ಯಾರ್ಥಿಗಳು ಕೂಡಿಕೊಂಡು ನನ್ನ ಗಮನಕ್ಕೆ ತಂದಿದ್ದೀರಿ ನಾನು ಇನ್ನು ಮುಂದೆ ಈ ರೀತಿ ಆಗದಂತೆ ನೋಡುತ್ತೇನೆ ಇನ್ನು ಮುಂದೆ ಸರಿಯಾದ ವ್ಯವಸ್ಥೆ ಕಂಡು ಬರದಿದ್ರೆ ನನ್ನನ್ನು ಭೇಟಿ ಮಾಡಿ ನಾನು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆಂದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ಅಶೋಕ್

error: Content is protected !!