ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿಶ್ವವಿದ್ಯಾಲಯ ಪೊಲೀಸ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ ಠಾಣೆ ವ್ಯಾಪ್ತಿಯ ಹಾಗೂ ನಗರದ ವಿವಿಧ ಕಡೆಗಳಲ್ಲಿ ಕಳ್ಳತನವಾಗಿದ್ದ ಬೈಕಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಪೊಲೀಸ ಆಯುಕ್ತರಾದ ಡಾ॥ ವೈ.ಎಸ್.ರವಿಕುಮಾರ, ಭಾ.ಪೊ.ಸೇ.ರವರ ಮಾರ್ಗದರ್ಶನದಲ್ಲಿ ಪೊಲೀಸ ಇನ್ಸಪೇಕ್ಟರ ಶ್ರೀ ಅರುಣ ಮುರಗುಂಡಿ ಹಾಗೂ ಅವರ ಸಿಬ್ಬಂದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿತರನ್ನು ಬಂಧಿಸಿದ್ದು, ಬಂಧಿತರಿಂದ ವಿವಿಧ ಕಂಪನಿಯ 47 ಬೈಕ್ ಅಂದಾಜು ಒಟ್ಟು ₹ 30,00,000/- ರೂಪಾಯಿ ಕಿಮ್ಮತ್ತಿನ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಸದರಿ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಕ್ಕಾಗಿ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತಾರೆ.