
ಮಹಾರಾಷ್ಟ್ರದ ನವಿ ಮುಂಬೈನಲ್ಲಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ವ್ಯಾನ್ ಚಾಲಕನನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.
ಮಾರ್ಚ್ 3 ರಂದು ಪನ್ವೇಲ್‌ನಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಆರೋಪಿಯು ಆಮಿಷವೊಡ್ಡಿ ತನ್ನ ವ್ಯಾನ್‌ನಲ್ಲಿ ಕೂರಿಸಿಕೊಂಡು, ಚಿಂಚವಲಿ ಶಿವರಾದ ಎಂಬ ಎಕಾಂತ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀಡಿತ ಬಾಲಕಿ ಈ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ, ಅವರ ದೂರು ಹಿನ್ನೆಲೆಯಲ್ಲಿ ಪೊಲೀಸರು ಕೂಡಲೇ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗುರುವಾರ, ಭಾರತೀಯ ದಂಡ ಸಂಹಿತೆ ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ಬಂಧಿತನನ್ನು ಮಾರ್ಚ್ 18ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.