ಶಿರಸಿ ನಗರ ಠಾಣೆ ಪಿಎಸ್ಆಯ್ ನಾಗಪ್ಪ ಬಿ ಇವರಿಗೆ 2022 ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಅಯ್ಕೆಯಾಗಿದ್ದಾರೆ.
ಶಿರಸಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಶಿರಸಿಗರಿಗೂ ಹೆಮ್ಮೆಯ ವಿಷಯವಾಗಿದೆ. ಶಿರಸಿ ಮಾರ್ಕೆಟ್ ಠಾಣೆಯ ಪಿಎಸ್ಆಯ್ ಆಗಿ ತಮ್ಮ ಪ್ರಾಮಾಣಿಕ ಸೇವೆಯ ಮೂಲಕ ಜನಸ್ನೇಹಿ ಪಿಎಸ್ಆಯ್ ಎಂದೇ ಗುರುತಿಸಿಕೊಂಡಿದ್ದ ಅವರು ಕಾರವಾರಕ್ಕೆ ವರ್ಗಾವಣೆಗೊಂಡಿದ್ದರು ನಂತರ ಅವರು ಪುನಃ ಶಿರಸಿ ನಗರ ಠಾಣೆಗೆ ಬಂದು ಪಿಎಸ್ಆಯ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನವರಾಗಿರುವ ನಾಗಪ್ಪ ರವರು ಗುಲ್ಬರ್ಗದಲ್ಲಿ ಪಿಎಸ್ಆಯ್ ಆಗಿ ನಿಯೋಜನೆಗೊಂಡ ಬಳಿಕ ಅವರು ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಠಾಣೆಯ ಪಿಎಸ್ಆಯ್ ಆಗಿ ಸೇವೆ ಸಲ್ಲಿಸಿದ್ದಾರೆ.

Related News

error: Content is protected !!