ಕಲಬುರಗಿ : ಅಫಜಲಪೂರ ತಾಲೂಕಿನ ಗೊಬ್ಬೂರ (ಕೆ) ರಸ್ತೆಯ ಬದಿಯಲ್ಲಿ 2022ರ ಜುಲೈ 5 ರಂದು ಪತ್ತೆಯಾದ ಒಂದು ದಿವಸದ ಹೆಣ್ಣು ಮಗುವನ್ನು ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ ಅದೇ ದಿನ ದಾಖಲಿಸಲಾಗಿದೆ ಎಂದು ಕಲಬುರಗಿ ಅಮೂಲ್ಯ ಶಿಶು ಗೃಹದ ಅಧೀಕ್ಷಕರು ತಿಳಿಸಿದ್ದಾರೆ.ಗೋಧಿ ಬಣ್ಣ ಹೊಂದಿರುವ ಈ ಹೆಣ್ಣು ಮಗುವು ಕಡಿಮೆ ತೂಕ ಹೊಂದಿರುತ್ತದೆ.ಮೇಲ್ಕಂಡ ಹೆಣ್ಣು ಶಿಶುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 30 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ ನೀಡಬೇಕು. ಇದಕ್ಕೆ ತಪ್ಪಿದಲ್ಲಿ ಕಾನೂನು ಪ್ರಕಾರ ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ಹಾಗೂ ದೂರವಾಣಿ ಸಂ.08472-265588, ಮೊಬೈಲ್ ಸಂಖ್ಯೆ 9380606476ಗೆ ಸಂಪರ್ಕಿಸಲು ಕೋರಲಾಗಿದೆ.