ಮುಂಡಗೋಡ ಅಕ್ಟೋಬರ್ 02 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತ ವ್ಯಾಪ್ತಿಯ ಹೊಸ ಓಣಿ ಗ್ರಾಮದಲ್ಲಿ ” ಜಲ ಜೀವನ ಮಿಷನ್ ” ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಲ್ ಸಿ ಪಾಟೀಲ್ ಮಾತನಾಡಿ ಮಾನ್ಯ ಸಚಿವರು ಸಾಲಗಾಂವ್ ಮತ್ತು ಚಿಗಳ್ಳಿ ಗ್ರಾಮ ಪಂಚಾಯತಿಗಳಿಗೆ ಸಾಕಷ್ಟು ಅನುದಾನವನ್ನು ನೀಡಿದ್ದಾರೆ ಮುಂದಿನ ದಿನಗಳಲ್ಲಿ ಎರಡು ಗ್ರಾಮ ಪಂಚಾಯತಿಗಳು ಮಾದರಿ ಗ್ರಾಮ ಪಂಚಾಯತಿಗಳು ಆಗಲಿವೆ ಎಂದ ಅವರು ಬೆಳೆ ಹಾನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿ ರೈತರಿಗೆ ಪರಿಹಾರವನ್ನು ಆದಷ್ಟು ಬೇಗ ಒದಗಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ಸಾಲಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ ಚಿಗಳ್ಳಿಯ ಶಿವಾಜಿ ಸರ್ಕಲ್ ನಿಂದ ಸಾಲಗಾಂವ್ ಗ್ರಾಮ ಪಂಚಾಯತಿಯವರೆಗೆ ಕಾಂಕ್ರೀಟ್ ರಸ್ತೆಯೂ ಸಹ ಮಂಜೂರಾಗಿದೆ ಎಂದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಪ್ರಮುಖರಾದ ಗುಡ್ಡಪ್ಪ ಕಾತೂರ, ವೈ.ಪಿ.ಪಾಟೀಲ್ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಕೊಣನಕೇರಿ, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ತಳವಾರ,ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ