10 ವರ್ಷದ ಬಾಲಕಿಯ ಮೇಲೆ 12 ವರ್ಷದ ವರ್ಷದ ಬಾಲಕರಿಬ್ಬರು ಅತ್ಯಾಚಾರ ಎಸಗಿದ್ದಾರೆ.
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಜುನವಾಯ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಟ ಆಡುತ್ತಿದ್ದ 10 ವರ್ಷದ ಬಾಲಕಿಯನ್ನ ಇಬ್ಬರು ಬಾಲಕರು ಆಟ ಆಡುವ ನೆಪಮಾಡಿ ಮೈದಾನಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸಂತ್ರಸ್ಥೆಯನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಸದ್ಯಕ್ಕೆ ಇಬ್ಬರು ಬಾಲಕರನ್ನ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಂಭಾಲ್‌ನ ಜುನವಾಯ್ ಪೊಲೀಸ್ ಠಾಣೆ ಅಧಿಕಾರಿಗಳು ಹೇಳಿದ್ದಾರೆ.