ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯ ಘಟನೆ ನಡೆದಿದೆ. ಮಧ್ಯಾಹ್ನ ಬಿಸಿಯೂಟದ ಬಳಿಕ ತಟ್ಟೆ ತೊಳೆಯುವ ವಿಷಯವನ್ನು ಕೇಂದ್ರಬಿಂದುವಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ಆರಂಭವಾಗಿದ್ದು, ಅದು ತಕ್ಷಣವೇ ಗಲಾಟೆಯಾಗಿ ಮಾರ್ಪಟ್ಟಿದೆ.
ಘಟನೆಯ ವೇಳೆ, ಶಾಲೆಯ ಎರಡು ಗುಂಪುಗಳ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡು ಬಟ್ಟೆ ಎಳೆದಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಕೂಡ ಒಬ್ಬ ವ್ಯಕ್ತಿ ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಅದೀಗ ವೈರಲ್ ಆಗಿದೆ.
ಸಮಾಚಾರ ತಿಳಿದ ಕೂಡಲೇ ಮುಳಬಾಗಿಲು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಗಲಾಟೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಘಟನೆಗಳು ಪುನರಾವೃತವಾಗದಂತೆ ಶಾಲಾ ಆಡಳಿತ ಮಂಡಳಿ ಮತ್ತು ಪೊಲೀಸ್ ಇಲಾಖೆ ಜಾಗೃತೆಯಾಗಿದ್ದು, ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ಶಿಸ್ತುಬದ್ಧ ಜೀವನದ ಪ್ರಾಮುಖ್ಯತೆಯನ್ನು ತಿಳಿಸುವಂತೆ ಸಲಹೆ ನೀಡಲಾಗಿದೆ.
ಶಿರಸಿ ನಗರ ಠಾಣೆ ಪಿಎಸ್ಆಯ್ ನಾಗಪ್ಪ ಬಿ ಇವರಿಗೆ 2022 ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಅಯ್ಕೆಯಾಗಿದ್ದಾರೆ.…
ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ ಮಾಡಲಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಖದೀಮರು ನಕಲಿ ನಂಬರ್…
ನಗರದಲ್ಲಿ ಖೋಟಾ ನೋಟು ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಗುರುವಾರ (ಮಾರ್ಚ್ 20) ನಡೆದ ಈ ಘಟನೆ ಮಾಲೀಕರ ಎಚ್ಚರಿಕೆಯ…
ಗದಗ: ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಕ್ಷೀರಭಾಗ್ಯ ಯೋಜನೆಗೆ ಖದೀಮರು ಕನ್ನ ಹಾಕಿರುವ…
ಬೆಂಗಳೂರು: "ನನ್ನ ವಿರುದ್ಧ ರೇಪ್ ಕೇಸ್ ಹಾಕಲು ಸಿಬಿಐ ತನಿಖೆ ಮಾಡಿಸಿದ್ದವರು ಡಿ.ಕೆ. ಶಿವಕುಮಾರ್" ಎಂದು ಶಾಸಕ ಮುನಿರತ್ನ ಗಂಭೀರ…
ಬೆಂಗಳೂರು: ಕರ್ನಾಟಕದಲ್ಲಿ ಹನಿಟ್ರ್ಯಾಪ್ ಮತ್ತು ರಾಜಕೀಯ ಮುಖಂಡರ ಸಿ.ಡಿ., ಪೆನ್‌ಡ್ರೈವ್ ಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ…