ಕಲಬುರಗಿ: ಆಗಸ್ಟ್ 2022ರ ಮಾಹೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಕೈಗೊಂಡು ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 15,941 ವಾಹನಗಳನ್ನು ತನಿಖೆ ನಡೆಸಿ 1092 ಪ್ರಕರಣಗಳನ್ನು ಪತ್ತೆ ಹಚ್ಚಿ 1255 ಟಿಕೇಟ್ ರಹಿತ ಪ್ರಯಾಣಿಕರಿಂದ 2,33,468 ರೂಪಾಗಳ ದಂಡವನ್ನು ವಸೂಲಿ ಮಾಡಿದ್ದಾರೆ.
ನಿಗಮದ ಆದಾಯದಲ್ಲಿ ಸೋರಿಕೆಯನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು. ಸಾರ್ವಜನಿಕ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ತಪ್ಪದೇ ಟಿಕೇಟ್/ಪಾಸ್ ಪಡೆದು ಪ್ರಯಾಣ ಮಾಡಿ ಇಲಾಖೆಗೆ ಸಹಕರಿಸಬೇಕು ಎಂದು ಕಲಬುರಗಿ ಕಲ್ಯಾಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ವರದಿ: ನಾಗರಾಜ್ ಗೊಬ್ಬುರ

error: Content is protected !!