ಮುಲಾಯಂ ಸಿಂಗ್ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಬೇರೆ ಬೇರೆ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದ. ಈತನಿಗೆ ಆನ್‌ಲೈನ್‌ನಲ್ಲಿ ಲೂಡೋ ಆಡುವ ಅಭ್ಯಾಸವಿತ್ತು. ಹೀಗೆ ಆಟವಾಡುವಾಗ ಗೇಮ್ ಆಯಪಲ್ಲಿ ಪಾಕ್ ಯುವತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಮದುವೆ ನಿರ್ಧಾರಕ್ಕೆ ಬಂದಿದ್ದರು. ಗೆಳತಿ ಪಾಕಿಸ್ತಾನದಲ್ಲಿದ್ದ ಕಾರಣ ನೇರವಾಗಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನ ಅರಿತಿದ್ದ ಮುಲಾಯಂ ಸಿಂಗ್ ಕರಾಚಿಯಿಂದ ದುಬೈಗೆ, ದುಬೈಯಿಂದ ನೇಪಾಳದ ಕಠ್ಮಂಡುಗೆ ಇಕ್ರಾಳನ್ನು ಕರೆಸಿಕೊಂಡಿದ್ದ. ನೇಪಾಳದಲ್ಲಿ ಇಬ್ಬರು ಮದುವೆಯಾಗಿದ್ದು ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಬಿಹಾರದ ಗಡಿ ಪ್ರವೇಶಿಸಿ ಪಾಟ್ನಾಗೆ ಬಂದಿದ್ದರು. ಬಳಿಕ ರೈಲಿನ ಮುಖಾಂತರ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು.
ಇತ್ತ ಇಕ್ರಾ ಜೀವನಿ ಪಾಕಿಸ್ತಾನದಲ್ಲಿರುವ ತಾಯಿ ಜೊತೆ ಮಾತನಾಡಲು ಕರೆ ಮಾಡುತ್ತಿದ್ದಳು. ಈ ವಿಷಯ ತಿಳಿದ ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು. ಕರೆ ಆಧಾರದಲ್ಲಿ ಪೊಲೀಸರು ಮುಲಾಯಂನನ್ನು ಬಂಧಿಸಿ ಇಕ್ರಾಳನ್ನು ಎಫ್‌ಆರ್‌ಆರ್‌ಒ ಸುಪರ್ದಿಗೆ ಒಪ್ಪಿಸಿದ್ದರು. ಇಕ್ರಾ ಜೀವನಿ ಮೇಲೆ ಯಾವುದೇ ದೂರು ದಾಖಲಿಸಿರಲಿಲ್ಲ. ಈಕೆ ಪಾಕ್ ಪ್ರಜೆ ಎಂಬುದು ಸಾಬೀತಾದ ಹಿನ್ನೆಲೆ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡಿಪಾರು ಮಾಡಲಾಗಿದೆ. ಇನ್ನೂ ಗಡಿಪಾರು ಮಾಡುವ ಸಂದರ್ಭದಲ್ಲಿ ಇಕ್ರಾ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ ಎಂದು ಪೊಲೀಸರ ಮುಂದೆ ಅಂಗಲಾಚಿದ್ದಾಳೆ. ನಂತರ ಪೊಲೀಸರು ಆಕೆಯ ಮನವೊಲಿಸಿ ಗಡಿಪಾರು ಮಾಡಿ ಬಂದಿದ್ದಾರೆ ಎನ್ನಲಾಗಿದೆ.
ಇಕ್ರಾಳನ್ನು ಅಕ್ರಮವಾಗಿ ಗಡಿದಾಟಿಸಿ ತಂದ ತಪ್ಪಿಗೆ ಮುಲಾಯಂ ಸಿಂಗ್ ಮೇಲೆ ವಿದೇಶಿ ಕಾಯ್ದೆಯ ಅಡಿಯಲ್ಲಿ ದೇಶದ ಭದ್ರತೆಗೆ ಅಪಾಯ ತಂದ ಆರೋಪದಡಿ ಜೈಲಿಗೆ ಕಳುಹಿಸಲಾಗಿದೆ. ತನಿಖೆಯ ವೇಳೆ ಈಕೆ ರವಾ ಯಾದವ್ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದ ವಿಚಾರ ಸಹ ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲದೇ ಆ ಹೆಸರಿನಲ್ಲೇ ಪಾಸ್‌ಪೋರ್ಟ್ ಪಡೆಯಲು ಅರ್ಜಿ ಸಲ್ಲಿಸಿದ್ದ ವಿಷಯ ಸಹ ಬಯಲಾಗಿತ್ತು.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…