ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಪ್ರಿಯಾ ಮೂಡಪುಜಿ ಖೋಖೋ ಸ್ಪರ್ದೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಈ ಮೊದಲು ಖೋಖೋ ಸ್ಪರ್ದೆಯಲ್ಲಿ ಭಾಗವಹಿಸಿ ವಲಯ ಮತ್ತು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಈ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದರು. ನಂತರ ವಿಭಾಗದ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಈ ಎಲ್ಲಾ ಪಂದ್ಯಗಳಲ್ಲಿ ಉತ್ತಮವಾಗಿ ಚತುರತೆಯಿಂದ ಆಟವಾಡಿ ಎಲ್ಲರ ಮನಗೆದ್ದ ವಿದ್ಯಾರ್ಥಿನಿ ಪ್ರಿಯಾ ಮೂಡಪುಜಿ ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈ ಪುಟ್ಟ ವಿದ್ಯಾರ್ಥಿನಿ ರಾಜ್ಯ ಮಟ್ಟದ ಖೋಖೋ ಸ್ಪರ್ದೆಗೆ ಆಯ್ಕೆಯಾಗಿದ್ದಕ್ಕೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಕುಟುಂಬದವರು, ಸಂಬಂಧಿಕರು, ಹಾಗೂ ಗ್ರಾಮದ ಸಮಸ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ದೆಯನ್ನು ಗೆದ್ದು ಗ್ರಾಮಕ್ಕೆ ಹಾಗೂ ಜಿಲ್ಲೆಗೆ ಒಳ್ಳೆಯ ಹೆಸರು ತರಲಿ ಎಂದು ಶುಭ ಹಾರೈಸಿದ್ದಾರೆ.

ವರದಿ: ವಿಶ್ವನಾಥ ಭಜಂತ್ರಿ

error: Content is protected !!