ಮಧ್ಯ ಪ್ರದೇಶದ ಶಾಸಕ ಹಾಗೂ ಮಾಜಿ ಸಚಿವರೊಬ್ಬರು ಟೀ ಮಾರಾಟಗಾರನಿಂದ ಮುಜುಗರ ಅನುಭವಿಸಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಜೆಪಿ ಶಾಸಕ ಕರಣ್​ ಸಿಂಗ್​ ವರ್ಮಾ ಅವರು ಸಿಹೋರ್​ ಜಿಲ್ಲೆಯ ಇಚವಾರ್​ ಪ್ರದೇಶದಲ್ಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿ, ಕಾರು ತಡೆದ ಟೀ ಮಾರಾಟಗಾರ 2018ರಿಂದ ಬಾಕಿ ಉಳಿಸಿಕೊಂಡಿದ್ದ ಟೀ ಕುಡಿದ ಹಣವನ್ನು ತಕ್ಷಣ ಪಾವತಿಸುವಂತೆ ಪಟ್ಟು ಹಿಡಿದನು.
ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಶಾಸಕ ಕರಣ್ ಸಿಂಗ್ ವರ್ಮಾ ಕೂಡ ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಈ ವೇಳೆ ಟೀ ವ್ಯಾಪಾರಿಯೊಬ್ಬರು ಶಾಸಕರನ್ನು ತಡೆದರು. ಬಾಕಿ ಮೊತ್ತವನ್ನು ಕೊಡುವಂತೆ ಒತ್ತಾಯಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
2018ರ ವಿಧಾನಸಭಾ ಚುನಾವಣೆಯ ನಂತರ ಕರಣ್ ಸಿಂಗ್ ವರ್ಮಾ ಟೀ ಮಾರಾಟಗಾರನಿಗೆ ನೀಡಬೇಕಾದ ಹಣ ಇದುವರೆಗೂ ಪಾವತಿಯಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ. ಮಾಜಿ ಸಚಿವರೂ ಇಷ್ಟು ಸಾಲ ಮಾಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

error: Content is protected !!